ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯತ ಉಪಾಧ್ಯಕ್ಷ ಸುನೀಲ್ ಲಮಾಣಿ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನನ್ನ ವೈಯಕ್ತಿಕ ಕೆಲಸಗಳ ಒತ್ತಡದಿಂದಾಗಿ ನಾನು ಸ್ವ ಇಚ್ಛೆಯಿಂದ ನನ್ನ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೆನೆ ಎಂದಿದ್ದಾರೆ. ಇನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ರೇಣುಕಾ ಕೋಣಕೇರಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು ರಾಜೀನಾಮೆಯನ್ನು ಸ್ವಿಕರಿಸುವಂತೆ ಮನವಿ ಮಾಡಿದ್ದಾರೆ.



