ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಜವಾಬ್ದಾರಿಗಳಿಗೂ ಆಜಾದ್ ವಿದಾಯ ಹೇಳಿದರು. ಕೇಂದ್ರ ಸಚಿವರಾಗಿ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಗುಲಾಂ ನಬಿ ಆಜಾದ್ ಸೇವೆ ಸಲ್ಲಿಸಿದ್ದರು. ಇಂದು ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದೊಂದಿಗಿನ ದಶಕಗಳ ಒಡನಾಟ ಅಂತ್ಯಗೊಂಡಿದೆ. ಆಜಾದ್ ಮುಂದಿನ ನಡೆ ಏನಿರಬಹುದು ಎಂಬುದು ಕುತೂಹಲ ಮೂಡಿಸಿದೆ.