ಮುಂಡಗೋಡ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗುಂಜಾವತಿ ಹತ್ತಿರ ಶುಕ್ರವಾರ ನಡೆದಿದೆ. ಬೆಂಡಿಕಟ್ಟಾ ಗ್ರಾಮದ ಯುವಕ ಗಂಗಾ ರಾಮ್ ಗಂಭೀರ ಗಾಯಗೊಂಡ ವ್ಯಕ್ತಿ.
ಮುಂಡಗೋಡನಿಂದ ಯಲ್ಲಾಪುರ ಕಡೆಗೆ ಹೊರಟ ಕಾರು ಬೈಕಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ.



