ಹಾಸನ: ಕಾಡಾನೆಗಳ ಹಾವಳಿಗೆ ಭಾರೀ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಸಕಲೇಶಪುರ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಡಿಸೋಜಾ ಎಂಬುವವರ ಕಾಫಿ ತೋಟದಲ್ಲಿ ಎರಡು ಸಲಗಗಳ ನಡುವೆ ಕಾದಾಟ ನಡೆದಿದ್ದು, ಫಸಲಿಗೆ ಬಂದಿದ್ದ ಕಾಫಿ, ಮೆಣಸಿನ ಗಿಡಗಳು, ಬೈನೆ ಮರಗಳು ನೆಲಸಮವಾಗಿವೆ.
ಬೆಳೆ ನಷ್ಟದಿಂದ ತೋಟದ ಮಾಲೀಕ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಡಿಸೋಜಾ ಒತ್ತಾಯಿಸಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಅಧಿಕಾರಿಗಳ ವಿರುದ್ದ ಕಾಫಿ ತೋಟದ ಮಾಲೀಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ದಶಕಗಳ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಲೆನಾಡು ಭಾಗದ ಜನ ಹಿಡಿಶಾಪ ಹಾಕಿದ್ದಾರೆ.