ಭಟ್ಕಳ: ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲ ಮತದಾರರು ತಮ್ಮ ಗುರುತಿನ ಚೀಟಿಯನ್ನು ಆಧಾರ ಕಾರ್ಡನೊಂದಿಗೆ ಲಿಂಕ್ ಮಾಡಿಕೊಳ್ಳಬೇಕು. ಈ ಸಂಬಂದ ಆಗಸ್ಟ 28 ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಮತಾದೇವಿ ಹೇಳಿದರು.
ತಾಲೂಕು ಆಡಳಿತದ ಸೌಧದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ, ಭಟ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟೂ 140 ಮತಗಟ್ಟೆಗಳಿದ್ದು ಮತದಾರರ ಪಟ್ಟಿಯಲ್ಲಿ ಪಾರದರ್ಶಕತೆ ತರಲು ಚುನಾವಣಾ ಆಯೋಗ ಮತದಾರ ಗುರುತಿನ ಚೀಟಿಯನ್ನು ಆಧಾರ ಲಿಂಕ್ ಮಾಡಿಕೊಳ್ಳಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಆಗಸ್ಟ 28 ರಂದು ಪ್ರತಿ ವಾರ್ಡ ಮಟ್ಟದಲ್ಲಿ ಮನೆ ಮನೆಗೆ ಸರಕಾರಿ ಸಿಬ್ಬಂದಿಗಳು ಭೇಟಿ ನೀಡಿ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ ಗೆ ಲಿಂಕ್ ಮಾಡಲು ಹೇಳಿ ಕೊಡಲಾಗುವುದು ಎಂದರು. ಮತದಾರರು ತಮ್ಮ ತಮ್ಮ ಸ್ಮಾರ್ಟ ಪೋನ್ ನಲ್ಲಿ ಆಪ್ ಡೌನ್ಲೋಡ್ ಮಾಡಿಕೊಂಡು ತಮ್ಮ ಎಪಿಕ್ ನಂಬರಿಗೆ ಆಧಾರ್ ಜೋಡಣೆ ಮಾಡಿಕೊಳ್ಳಬಹುದು. ಈ ಸಂಭಂದ ಎಲ್ಲ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಂಡು ಸಹಕರಿಸಬೇಕು ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ ಸುಮಂತ ಇದ್ದರು.