ಪುರಾತನ ಸದಾಶಿವ ದೇವಸ್ಥಾನದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ

ಮುಂಡಗೋಡ: ಶ್ರಾವಣ ಮಾಸದ ಕೊನೆಯ ದಿನವಾದ ಶುಕ್ರವಾರ ಪಟ್ಟಣದ ಕಿಲ್ಲೆ ಓಣಿಯಲ್ಲಿರುವ ಪುರಾತನ ಕಾಲದ ಸದಾಶಿವ ದೇವಸ್ಥಾನದಲ್ಲಿ ವಿಶೇಷವಾದ ಪೂಜೆ ಹೋಮ-ಹವನಗಳು ಜರುಗಿದವು.

ಪಟ್ಟಣದ ಕಿಲ್ಲೆ ಓಣಿಯಲ್ಲಿರುವ ಪುರಾತನ ದೇವಾಲಯದಲ್ಲಿ ಇಂದು ಶ್ರಾವಣ ಮಾಸದ ಅಂಗವಾಗಿ ಪ್ರತಿವರ್ಷದಂತೆ ವಿಶೇಷವಾಗಿ ಪೂಜೆ, ಹೋಮ, ಹವನ, ಅಭಿಷೇಕ, ರುದ್ರ ಮಹಾಯಾಗ ಸೇರಿದಂತೆ ವಿಶೇಷ ಪೂಜೆಗಳು ಜರುಗಿದವು. ನೂರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.