ಭೀಕರ ರಸ್ತೆ ಅಪಘಾತ.! ಪಟಾಕಿ ತರಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹಾವೇರಿ: ಚಲಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಾಕನೂರು ಕ್ರಾಸ್ ಬಳಿ ನಡೆದಿದೆ.

ಮೃತರನ್ನು ದಾವಣಗೆರೆ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಶಶಿಧರ (20) ಮತ್ತು ಕಿರಣ (21) ಎಂದು ಗುರುತಿಸಲಾಗಿದೆ. ಪಟಾಕಿ ತರಲು ರಾಣೆಬೆನ್ನೂರಿಗೆ ಹೋಗಿ ದಾವಣಗೆರೆಗೆ ವಾಪಸ್ ಆಗುತ್ತದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಮೂವರನ್ನು ರಾಣೆಬೆನ್ನೂರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಕುಮಾರಪಟ್ಟಣಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.