ಕುಮಟಾದಲ್ಲಿ ಹಿಟ್ & ರನ್.! ಅಪರಿಚಿತ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು.!

ಕುಮಟಾ: ಅಪರಿಚಿತ ವ್ಯಕ್ತಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಪಟ್ಟಣದ ಸನ್ಮಾನ್ ಹೊಟೆಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತ ನಡೆದರೂ ಟ್ಯಾಂಕರ್ ಚಾಲಕ ವಾಹನ ನಿಲ್ಲಿಸದೇ ಎಸ್ಕೇಪ್ ಆಗಿದ್ದಾನೆ.

ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಅಂಕೋಲಾ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದಾನೆ. ಸ್ಥಳಕ್ಕೆ 108 ಅಂಬ್ಯುಲೆನ್ಸ್ ಹಾಗೂ ಕುಮಟಾ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ಕುಮಟಾ ಸರ್ಕಾರಿ ತಾಲೂಕಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ಮೃತ ವ್ಯಕ್ತಿ ಮಾನಸಿಕ ಅಸ್ವಸ್ತ ಎಂದು ತಿಳಿದು ಬಂದಿದೆ. ಕಳೆದ ಕೆಲ ತಿಂಗಳಿನಿಂದ ಕುಮಟಾ ಪಟ್ಟಣದಲ್ಲಿ ತಿರುಗಾಡುತ್ತಿದ್ದ ಎಂದು ತಿಳಿದು ಬಂದಿದೆ.