ಲಾಸನ್: ಭಾರತದ ನೀರಜ್ ಚೋಪ್ರಾ ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಈ ಮೂಲಕ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಗೌರವ ತಮ್ಮದಾಗಿಸಿಕೊಂಡರು.
ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್ 89.04 ಮೀ. ಎಸೆಯುವ ಮೂಲಕ ಮೊದಲ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಜೇಕಬ್ ವಾಡ್ಲೆಚ್ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್ ಥಾಂಪ್ಸನ್ (83.72 ಮೀ.) ಮೂರನೇ ಸ್ಥಾನ ಗಳಿಸಿದರು.