ಅಳಿವಿನಂಚಿನ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನ.! ಇಬ್ಬರ ಬಂಧನ.!

ಮಡಿಕೇರಿ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ. ಎಸ್.ಎ ಜಗದೀಶ್ ಕುಮಾರ್, ಗೈಲೂಸ ಬಂಧಿತ ಆರೋಪಿಗಳು. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹಾರಂಗಿ ಸಮೀಪದ ಬೊಳ್ಳೂರು ಮಾದಾಪಟ್ಟಣ ರಸ್ತೆಯ ಜಂಕ್ಷನ್ ಬಳಿ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಸಹಿತ ಒಂದು ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್ ಕಾನ್ಸ್ಬಲ್ ಗಳಾದ ಶೇಖರ್, ರಾಜೇಶ್, ರಾಘವೇಂದ್ರ , ಯೋಗೇಶ್, ಮೋಹನ, ಕಾನ್ಸೆಬಲ್‌ಗಳಾದ ಸ್ವಾಮಿ ಹಾಗೂ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.