ಭಟ್ಕಳದಲ್ಲಿ 61 ಕೋ. ರೂ ವೆಚ್ಚದ ವಿದ್ಯಾರ್ಥಿ ನಿಲಯ, ವಸತಿ ಶಾಲೆಯ ಲೋಕಾರ್ಪಣೆ

ಭಟ್ಕಳ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ 61 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಯ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭಾನುವಾರ ಉದ್ಘಾಟಿಸಿದರು.

20.88 ಕೋಟಿ ವೆಚ್ಚದಲ್ಲಿ ಮಂಕಿಯಲ್ಲಿ ನಿರ್ಮಾಣವಾದ ಇಂದಿರಾಗಾಂಧಿ ವಸತಿ ಶಾಲೆ, 3.26 ಕೋಟಿ ವೆಚ್ಚದಲ್ಲಿ ಭಟ್ಕಳ ಸಾಗರ ರಸ್ತೆ ಸಮೀಪ ನಿರ್ಮಾಣವಾದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, 2.40 ಕೋಟಿ ವೆಚ್ಚದಲ್ಲಿ ಭಟ್ಕಳ ಆನಂದ ಆಶ್ರಮ ಕಾನ್ಮೆಂಟ್ ಸಮೀಪ ನಿರ್ಮಾಣವಾದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ತಾಲೂಕಿನ ಹೆಬಳೆ ಪಂಚಾಯತ ವ್ಯಾಪ್ತಿಯಲ್ಲಿ 18.49 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಅದೇ ಭಾಗದಲ್ಲಿ 16.88 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಮೊರಾರ್ಜಿ  ದೇಸಾಯಿ ವಸತಿ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಸುನೀಲ ನಾಯ್ಕ, ತಹಸೀಲ್ದಾರ್ ಸುಮಂತ ಬಿ, ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಸುಬ್ರಾಯ್ ದೇವಾಡಿಗ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.