ಮುಂಡಗೋಡದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಜಾಗೃತಿ ಕಾರ್ಯಾಗಾರ

ಮುಂಡಗೋಡ: ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಮಾನವ ಹಕ್ಕುಗಳ ಸಂರಕ್ಷಣೆ ಕೇಂದ್ರ ಧಾರವಾಡ ಮತ್ತು ಮಹಿಳಾ ಸಾಂತ್ವನ ಕೇಂದ್ರ ಮುಂಡಗೋಡದಿಂದ ಪಟ್ಟಣದ ಆದಿಜಾಂಬವ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮಾನವ ಹಕ್ಕುಗಳು, ಲಿಂಗ ಸಮಾನತೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಪಿಎಸ್‌ಐ ಮಹೇಶ ಮಾಳಿ ಮಾತನಾಡಿ, ವಿದ್ಯಾರ್ಥಿಗಳಿಗೆ ರಸ್ತೆ ನಿಯಮ, ಪೋಕ್ಸೊ ಕಾಯ್ದೆ, ಶಿಕ್ಷಣ ಸವಲತ್ತು ಮತ್ತು ಬಾಲಾಪರಾಧಗಳ ಮಾಹಿತಿ ತಿಳಿಸಿದರು. ಸಾಧನಾ ಸಂಸ್ಥೆಯ ಸಂಸ್ಥಾಪಕಿ ಡಾ. ಇಸಬೆಲಾ ಜೇವಿಯರ್ ಮಾತನಾಡಿ, ಹೆಣ್ಣುಮಕ್ಕಳು ಎದುರಿಸುವ ಸವಾಲುಗಳು, ಬಾಲ್ಯವಿವಾಹ ಲಿಂಗ ಸಮಾನತೆ, ಹೆಣ್ಣು ಭ್ರೂಣ ಹತ್ಯೆ ಮತ್ತು ಮಹಿಳಾ ಶಿಕ್ಷಣದ ಅಗತ್ಯತೆ ಬಗ್ಗೆ ಉಪನ್ಯಾಸ ನೀಡಿದರು.

ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಬಿ ಅಮಿನಾ, ಅಂಬುರೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.