ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು.! ದೊಡ್ಡ ವಾಹನಗಳ ಸಂಚಾರಕ್ಕೆ ತೊಂದರೆ.!

ಯಲ್ಲಾಪುರ: ತಾಲೂಕಿನಲ್ಲಿ ಬುಧವಾರ ಸಂಜೆ ಸುರಿದ ಭಾರಿ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ.
ತಾಲೂಕಿನ ಚವತ್ತಿ ಬಳಿ ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯೇ ಬಿರುಕು ಬಿಟ್ಟಿದ್ದು, ಲಾರಿ, ಬಸ್ ನಂತಹ ವಾಹನಗಳ ಸಂಚಾರಕ್ಕೆ ತೊಂದರೆ ಉಂಟುಮಾಡಿದೆ. ಚವತ್ತಿ ಬಳಿ ರಸ್ತೆ ಪಕ್ಕದ ಗದ್ದೆ, ತೋಟಗಳಿಗೆ ನುಗ್ಗಿದ ನೀರು ರಭಸದಿಂದ ರಸ್ತೆಯತ್ತ ನುಗ್ಗಿದ್ದು, ರಸ್ತೆಯಲ್ಲಿ ಬಿರುಕು ಮೂಡಿ ರಸ್ತೆ ಕಿತ್ತು ಹೋಗಿದೆ.