ಮುರುಘಾ ಶ್ರೀಗಳನ್ನು ಶೀಘ್ರ ಬಂಧಿಸಿ – ಎಎಪಿ ವೀರಭದ್ರ ನಾಯ್ಕ್ ಆಗ್ರಹ

ಸಿದ್ದಾಪುರ: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಗಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಗಳನ್ನು ಬಂಧಿಸಿ ತನಿಖೆ ನಡೆಸುವಂತೆ ಆಮ್ ಆದ್ಮಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ವೀರಭದ್ರ ನಾಯ್ಕ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಲೈಂಗಿಕ ದೌರ್ಜನಕ್ಕೆ ಒಳಗಾದ ಹೆಣ್ಣು ಮಕ್ಕಳು ಮೈಸೂರಿನ ಒಡನಾಡಿ ಸಂಸ್ಥೆ ಮೂಲಕ ದೂರು ದಾಖಲಿಸಿದ್ದಾರೆ. ಇದನ್ನು ತಿಳಿದ ಸ್ವಾಮೀಜಿ ಮಠ ಬಿಟ್ಟು ಪರಾರಿಯಾಗಿಲು ಪ್ರಯತ್ನ ನಡೆಸಿದ್ದರು. ಆದರೆ ನಂತರ ನಡೆದಿದ್ದೇ ಬೇರೆ.

ಹೀಗಾಗಿ ಶ್ರೀಗಳನ್ನು ತಕ್ಷಣ ಬಂಧಿಸಿ, ತನಿಖೆ ನಡೆಸಬೇಕು. ಅವರು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರಿಗೆ ಶಿಕ್ಷೆಯನ್ನು ಕೊಡಬೇಕು. ನಿರಪರಾಧಿಗಳು ಎಂದು ಕಂಡುಬಂದರೆ ಅವರನ್ನು ಬಿಡುಗಡೆ ಮಾಡಬೇಕು. ಹಾಗಾಗಿ ಕೂಡಲೇ ಅವರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ವೀರಭದ್ರ ನಾಯ್ಕ ಸರ್ಕಾರವನ್ನು ಆಗ್ರಹಿಸಿದ್ದಾರೆ.