ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ಸರ್ಕಾರದ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಂದ ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಮತ್ತು ಸಂಸ್ಥೆಗಳು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ, ಕಾರವಾರ ಜಿಲ್ಲಾ ಮಕ್ಕಳ ರಕ್ಷಣಾಘಟಕ ಅಥವಾ ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಸೆ. 30 ರೊಳಗೆ ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಅವಧಿ ಮಿರಿದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ, ಕಾರವಾರ ಜಿಲ್ಲಾ ಮಕ್ಕಳ ರಕ್ಷಣಾಘಟಕ ಅಥವಾ ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸುವಂತೆ ಎಂದು ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.