ಗದಗ: ಬೆಣ್ಣೆ ಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹಕ್ಕೆ ಹೊಳೆಆಲೂರು ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದ್ದು ಹೊಳೆಆಲೂರು – ಬದಾಮಿ ಸಂಚಾರ ಸ್ಥಗಿತಗೊಂಡಿದೆ. ಹೊಳೆಆಲೂರು ಮೆಣಸಗಿ ಮಾರ್ಗವಾಗಿ ಕೊಣ್ಣೂರಿಗೆ ತೆರಳುವ ಸಂಪರ್ಕವೂ ಕಡಿತಗೊಂಡಿದ್ದು, ಬೆಣ್ಣೆ ಹಳ್ಳದ ಪ್ರವಾಹಕ್ಕೆ ಪ್ರಯಾಣಿಕರು ಪರದಾಟ ಅನುಭವಿಸುತ್ತಿದ್ದಾರೆ.
ಇನ್ನು ಬೆಣ್ಣೆ ಹಳ್ಳ ಹಾಗೂ ಮಲಪ್ರಭಾ ನದಿಯ ಅಬ್ಬರಕ್ಕೆ ಬೆಳೆಗಳು ಜಲಾವೃತಗೊಂಡಿವೆ. ಹಳ್ಳ, ನದಿಯ ದಡದಲ್ಲಿ ಇರುವ ಜಮೀನಿನಲ್ಲಿ ಗೋವಿನಜೋಳ ಕಬ್ಬು, ಹತ್ತಿ, ಈರುಳ್ಳಿ ಸೇರಿದಂತೆ ಅನೇಕ ಬೆಳೆಗಳು ನೀರು ಪಾಲಾಗಿವೆ. ಕಷ್ಟ ಪಟ್ಟು ಬೆಳೆದ ಬೆಳೆಗಳು ಹಾನಿಯಾಗಿದ್ದು ರೈತರು ಕಂಗಾಲಾಗಿದ್ದಾರೆ.