ಬೆಳಗಾವಿ: ಅಕ್ರಮವಾಗಿ ಜನವಸತಿ ಪ್ರದೇಶದಲ್ಲಿ ಪಟಾಕಿ ಸಂಗ್ರಹಿಸಿದ್ದ ಆರೊಪದ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 1.60 ಲಕ್ಷ ರೂ. ಮೌಲ್ಯದ ಪಟಾಕಿಯನ್ನು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ.
ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾರಾಟಕ್ಕಾಗಿ ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದರು. ಅನುಮತಿ ಇಲ್ಲದೇ ಮಾರಾಟದ ಉದ್ದೇಶದಿಂದ ಪಟಾಕಿ ಸಂಗ್ರಹಿಸಿಟ್ಟಿದ್ದು ಕಾನೂನು ಬಾಹಿರವಾದ್ದರಿಂದ ಖಚಿತ ಮಾಹಿತಿ ಮೇರೆಗೆ ಅಂಗಡಿ ಮೇಲೆ ಪೊಲೀಸರು ರೈಡ್ ಮಾಡಿದ್ದಾರೆ. ಈ ವೇಳೆ 1,60,675 ರೂ.ಮೌಲ್ಯದ ಪಟಾಕಿಗಳು ಸಿಕ್ಕಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.