ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚುತ್ತದೆ – ಸಚಿವ ಶಿವರಾಮ ಹೆಬ್ಬಾರ್

ಯಲ್ಲಾಪುರ: ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಶನಿವಾರ ಪಟ್ಟಣದ ಕಾಳಮ್ಮಾನಗರ ಕ್ರೀಡಾಂಗಣದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸುವ ಮೂಲಕ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಶುಭ ಕೋರಿದರು.

ಎಂಎಲ್ಸಿ ಶಾಂತಾರಾಮ ಸಿದ್ದಿ, ಪಂಚಾಯತ್ ರಾಜ್ ವಿಕೇಂದ್ರೀಕರಣ ಮತ್ತು ಅಭಿವೃದ್ಧಿ ಸಮೀತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪ.ಪಂ ಅಧ್ಯಕ್ಷೆ ಸುನಂದಾದಾಸ್, ಉಪಾಧ್ಯಕ್ಷೆ ಶ್ಯಾಮಲಿ ಪಾಟಣಕರ್,ಯುವ ಒಕ್ಕೂಟದ ಗೌರವಾಧ್ಯಕ್ಷ ರವಿ ಭಟ್ಟ ಬರಗದ್ದೆ, ಬಿಇಒ ಎನ್.ಆರ್.ಹೆಗಡೆ ಹಾಗೂ ಮತ್ತಿತರು ಉಪಸ್ಥಿತರಿದ್ದರು.