ಸಾವಿನಲ್ಲೂ ಒಂದಾದ ದಂಪತಿ: ಪತ್ನಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತಿಯೂ ಸಾವು

ಗದಗ: ಪತ್ನಿ ಸಾವಿನ ಸುದ್ದಿ ಕೇಳಿ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತಾಲೂಕಿನ ಕಣಗಿನಾಳ ಗ್ರಾಮದಲ್ಲಿ ನಡೆದಿದೆ. ಪತ್ನಿ ಈರವ್ವ ರಾಮಶೆಟ್ರ (65) ಅನಾರೋಗ್ಯದಿಂದ ಸಾವನ್ನಪ್ಪಿದ್ದಳು. ಈ ಸುದ್ದಿಯನ್ನು ಕೇಳಿದ ಪತಿ ಸಿದ್ದರಾಮ ರಾಮಶೆಟ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತರ ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.