ಕಲುಷಿತ ನೀರು ಸೇವಿಸಿ 6 ಜನ ಅಸ್ವಸ್ಥ: ಗ್ರಾಮದಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಚಿಕಿತ್ಸೆ

ಕಲಬುರಗಿ: ಕಲುಷಿತ ನೀರು ಸೇವಿಸಿ ಮತ್ತೆ ಆರು ಜನ ಅಸ್ವಸ್ಥಗೊಂಡ ಘಟನೆ ಕಮಲಾಪುರ ತಾಲೂಕಿನ ಗೊಬ್ಬುರವಾಡಿ ಗ್ರಾಮದಲ್ಲಿ ನಡೆದಿದೆ.

ವಾಂತಿ-ಭೇದಿ ಉಲ್ಭಣವಾಗಿ ಅಸ್ವಸ್ಥರಾದವರಿಗೆ ಗ್ರಾಮದಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ. ಗ್ರಾಮಕ್ಕೆ ಶಾಸಕ ಬಸವರಾಜ್ ಮತ್ತಿಮೂಡ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಭೇಟಿ ಪರಿಶೀಲಿದ್ದಾರೆ. ಈ ವೇಳೆ ಗ್ರಾಮಸ್ಥರು ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿದ್ದಾರೆ.