ಕುಮಟಾ: ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕುಮಟಾ ಪಟ್ಟಣದಲ್ಲಿ ಸಂಭವಿಸಿದೆ. ತಾಲೂಕಿನ ಹೆಗಡೆಯ ಪಂಚರಬೇಣದ ದತ್ತಾ ಶಾನಭಾಗ (40) ಮೃತ ದುರ್ದೈವಿ.
ಈತ ಪಟ್ಟಣದ ದಾಸ್ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಡಿ.ಟಿ.ಎಚ್ ಸರಿಪಡಿಸುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಮೂರನೆಯ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.