ಸೂರ್ವೆಯ ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಿಧನಕ್ಕೆ ಶಾಸಕಿ ರೂಪಾಲಿ ತೀವ್ರ ಸಂತಾಪ

ಕಾರವಾರ: ಕರ್ನಾಟಕದ ಬಾರ್ಡೋಲಿ ಅಂಕೋಲೆಯ ಸ್ವಾತಂತ್ರ್ಯ ಹೋರಾಟಗಾರ ಸೂರ್ವೆ ವೆಂಕಣ್ಣ ನಾಯಕ ಅವರ ನಿಧನಕ್ಕೆ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ಎಸ್. ನಾಯ್ಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವೆಂಕಣ್ಣ ನಾಯಕ ಅವರನ್ನು ಸನ್ಮಾನಿಸಿ ಆಶೀರ್ವಾದವನ್ನು ಪಡೆದುಕೊಂಡಿದ್ದೆ. ಇಂದು ಅವರು ಅಗಲಿರುವ ವಿಷಯ ತಿಳಿದು ಮನಸ್ಸಿಗೆ ಅತೀವ ನೋವುಂಟಾಗಿದೆ‌‌ ಎಂದಿದ್ದಾರೆ. ಅಂಕೋಲಾದ ಐತಿಹಾಸಿಕ ಸ್ವಾತಂತ್ರ್ಯ ಹೊರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ. ಸ್ವಾತಂತ್ರ್ಯ ಹೋರಾಟಗಾರ ತ್ಯಾಗ ಬಲಿದಾನ ಅವಿಸ್ಮರಣೀಯವಾಗಿದ್ದು. ಅವರ ನೆನಪು ಅಜರಾಮರವಾಗಿರಲಿದೆ. ಸ್ವಾತಂತ್ರ್ಯದ ಹೋರಾಟದಲ್ಲಿ ಕರ್ನಾಟಕದ ಬಾರ್ಡೋಲಿ ಅಂಕೋಲೆಯ ಹೋರಾಟಗಾರರ ಪಾತ್ರ ಅತಿದೊಡ್ಡದು. ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಹಾಗೂ ಎಲ್ಲರಿಗೂ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.