ಚಿತ್ರದುರ್ಗ: ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನವಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರೀಗಳನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ. ಕೆ ಕೋಮಲಾ ಸೆ. 14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.