ಯಲ್ಲಾಪುರ: ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಯಲ್ಲಾಪುರ ಸಹಯೋಗದಲ್ಲಿ ಪೋಷಣ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ‘ಪೋಷಣ ರಥ’ ಜಾಥಾ ನಡೆಯಿತು.
ವೆಂಕಟರಮಣ ಮಠದ ಬಳಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹಸಿರು ನಿಶಾನೆ ತೋರುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್,ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಜಗದೀಶ ಕಮ್ಮಾರ, ಸಿಡಿಪಿಒ ರಫೀಕಾ ಹಳ್ಳೂರ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.