ಕಾರವಾರ: ಶೈಕ್ಷಣಿಕ ಕ್ರಾಂತಿಯ ಮೂಲಕ ಜನಮಾನಸದಲ್ಲಿ ನೆಲೆಯಾದ ಮಾಜಿ ಸಚಿವರು, ಮಾರ್ಗದರ್ಶಕರು, ಹಿತೈಷಿಗಳೂ ಆದ ಪ್ರಭಾಕರ ಎಸ್. ರಾಣೆ ಅವರ ಅಗಲಿಕೆ ತೀವ್ರ ನೋವನ್ನು ಉಂಟುಮಾಡಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಣೆಯವರು ವಯಸ್ಕರ ಶಿಕ್ಷಣ ಸಚಿವರಾಗಿ ಉತ್ತಮ ಆಡಳಿತ ನಡೆಸಿ, ರಾಜ್ಯಾದ್ಯಂತ ಮನೆಮಾತಾಗಿದ್ದರು. ಅವರ ಅಗಲುವಿಕೆಯಿಂದ ನನ್ನ ಕ್ಷೇತ್ರದ ಸಜ್ಜನ, ಹಿರಿಯ ನಾಯಕರನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ಅಗಲುವಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದ್ದಾರೆ.