ಸೆ. 17 ರಂದು ಜಿಲ್ಲೆಗೆ ರಾಜ್ಯಪಾಲರ ಭೇಟಿ.!

ಕಾರವಾರ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೆ. 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸೆ. 17 ರಂದು ಅಂತರಾಷ್ಟ್ರೀಯ ಕಡಲತೀರಗಳ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮವಿದ್ದು ಅದೇ ದಿನ ರಾಜ್ಯಪಾಲರು ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ರಾಜ್ಯಪಾಲರ ಈ ದಿಢೀರ್ ಭೇಟಿ ನಿಶ್ಚಯವಾಗಿರುವ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.