ಜಿಲ್ಲೆಯಲ್ಲಿ ನಿರ್ಣಾಯಕ ಮತದಾರರಿರುವ ಮರಾಠ ಸಮುದಾಯಕ್ಕೆ ಟಿಕೇಟ್ ನೀಡಲು ಆಗ್ರಹ.!

ಕಾರವಾರ: ಮುಂಬರುವ ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಮರಾಠ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಕಾರವಾರ ತಾಲೂಕಾಧ್ಯಕ್ಷ ಅಭಿಷೇಕ ರಾಣೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾ ಹೇಳಿಕೆ ನೀಡಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕ್ಷತ್ರಿಯ ಮರಾಠ ಸಮುದಾಯ ಪಂಗಡ ಮತ್ತು ಉಪಪಂಗಡದ ಹೆಚ್ಚಿನ ಮತದಾರರಿದ್ದಾರೆ. ರಾಷ್ಟ್ರೀಯ ಪಕ್ಷಗಳು ಅನೇಕ ಬಾರಿ ಈ ಸಮುದಾಯದವರನ್ನು ನಿರ್ಲಕ್ಷಿಸಿದೆ. ಈ ಹಿಂದೆ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಸಮುದಾಯದ ನಾಯಕರು ಅನೇಕ ಕೊಡುಗೆ ನೀಡಿದ್ದಾರೆ ಹಾಗೂ ಈ
ಕ್ಷೇತ್ರದಲ್ಲಿ ನಮ್ಮ ಸಮುದಾಯದ ಮತ ನಿರ್ಣಾಯಕವಾಗಿರುತ್ತದೆ.

ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ನಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕೇಂದು ಆಗ್ರಹಿಸಿದ್ದಾರೆ.