ನವದೆಹಲಿ: ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ. ಕತ್ತಿ (62) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಮೇಶ್ ಕತ್ತಿ ನಿಧನದಿಂದ ಬಹಳ ನೋವಾಗಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿದ್ದಾರೆ.
‘ಉಮೇಶ್ ಕತ್ತಿ ಅನುಭವೀ ನಾಯಕ. ಕರ್ನಾಟಕದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಅಗಲುವಿಕೆಯಿಂದ ತುಂಬಾ ನೋವಾಗಿದೆ. ಈ ದುಃಖದ ಸನ್ನಿವೇಶದಲ್ಲಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೋವು ಸಹಿಸುವ ಶಕ್ತಿ ದೊರೆಯಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.