ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆರ್.ಎಂ.ಹೆಗಡೆ ಬಾಳೇಸರ ಅವಿರೋಧ ಆಯ್ಕೆ

ಸಿದ್ದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಹಾಗೂ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ಎಂ.ಹೆಗಡೆ ಬಾಳೇಸರ ಅವಿರೋಧ ಆಯ್ಕೆಯಾಗಿದ್ದಾರೆ.

ಈ ಹಿಂದೆ ಹಿರಿಯ ಸಹಕಾರಿಯಾಗಿದ್ದ ಷಣ್ಮುಖ ಗೌಡರ್ ನಿರ್ದೇಶಕರಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆರ್.ಎಂ.ಹೆಗಡೆ ಬಾಳೇಸರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.‌ ಇವರ ಆಯ್ಕೆಗೆ ಸಹಕಾರಿಗಳು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.