ದೇಶದ 22 ಕಡೆಗಳಲ್ಲಿ ಐಟಿ ರೈಡ್.! ಮಣಿಪಾಲ್ ಗ್ರೂಪ್ ಮೇಲೂ ಆದಾಯ ತೆರಿಗೆ ದಾಳಿ.!

ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೂ ಐಟಿ ದಾಳಿ ನಡೆಸಿದೆ.

ಬೆಂಗಳೂರಿನ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ಹಿನ್ನೆಲೆ, ಉಡುಪಿ ಜಿಲ್ಲೆ ಮಣಿಪಾಲ್ ನಲ್ಲೂ ಐಟಿ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರಿನಿಂದ ಕಾರು ಬಾಡಿಗೆ ಪಡೆದು ದಾಳಿ ಮಾಡಿದ್ದಾರೆ. ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.