ನವದೆಹಲಿ: ಮಾಲಿನ್ಯವನ್ನು ತಡೆಗಟ್ಟಲು ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ನಿಷೇಧವನ್ನು ಜನವರಿ 1 ರವರೆಗೆ ವಿಸ್ತರಿಸಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಆದೇಶ ಹೊರಡಿಸಿದ್ದಾರೆ. ಆನ್‌ಲೈನ್ ಮಾರಾಟಕ್ಕೂ ಸಹ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ರೈ ಟ್ವಿಟ್ ಮಾಡಿದ್ದಾರೆ.
ಅಲ್ಲದೇ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸ್, ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ವರ್ಷ ಹಬ್ಬದ ಸೀಸನ್‌ಗೂ ಮುಂಚಿತವಾಗಿ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸುವಂತೆ ದೆಹಲಿ ಸರ್ಕಾರ ಆದೇಶಿಸಿತ್ತು. ಅಲ್ಲದೇ ಎಎಪಿ ಪಟಾಕಿ ವಿರುದ್ಧ ಜಾಗೃತಿ ಮೂಡಿಸಲು ‘ಪತಾಖೆ ನಹಿ ದಿಯೆ ಜಲಾವೋ’ ಅಭಿಯಾನವನ್ನೂ ಆರಂಭಿಸಿತ್ತು.