ಎಸ್ಎಫ್ಐ ನಿಂದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

ಕಾರವಾರ: ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಉತ್ತರ ಕನ್ನಡ ಜಿಲ್ಲಾ ಸಮಿತಿಯವರು ಮಾನ್ಯ ಜಿಲ್ಲಾಧಿಕಾರಿಗಳು ಉತ್ತರ ಕನ್ನಡ, ಕಾರವಾರ ಮತ್ತು ಶಿರಸಿ ಸಹಾಯಕ ಆಯುಕ್ತರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರ ತೀವ್ರವಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದಕ್ಕೆಲ್ಲ ರಾಜ್ಯ ಬಿಜೆಪಿ ಸರ್ಕಾರದ ಶಿಕ್ಷಣ ವಿರೋಧಿ ನೀತಿಗಳು ಕಾರಣ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಉತ್ತರ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ. ವಿವಿಧ ಶೈಕ್ಷಣಿಕ ಸಮಸ್ಯೆಗಳ ಈಡೇರಿಕೆಗಾಗಿ ಆಗ್ರಹಿಸಿ ಸೆ. 7 ರಂದು ರಾಜ್ಯಾದ್ಯಂತ ತಾಲ್ಲೂಕು , ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಈ ಕೆಳಕಂಡ ಬೇಡಿಕೆಗಳ ಮನವಿ ಪತ್ರವನ್ನು ಮಾನ್ಯ ಮುಖ್ಯಮಂತ್ರಿ ರವರಿಗೆ ಸಲ್ಲಿದೆ.

  • ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು.
  • ಹಾಸ್ಟೆಲ್ ಪ್ರವೇಶಕ್ಕೆ ಕೌನ್ಸಿಲಿಂಗ್ ಕೈಬಿಟ್ಟು ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೀಟ್ ನೀಡಬೇಕು.
  • ಶೈಕ್ಷಣಿಕ ಪ್ರೋತ್ಸಾಹ ಯೋಜನೆಗಳು ಸಮರ್ಪಕವಾಗಿ ಜಾರಿಗೊಳಿಸಬೇಕು.
  • ಪಠ್ಯ ಪುಸ್ತಕಗಳ ಕೋಮುವಾದೀಕರಣ ಹಾಗೂ ಸಾವರ್ಕರ್ ಬುಲ್ ಬುಲ್ ಹಕ್ಕಿ ಮೇಲೆ ಪ್ರಯಾಣದ ಅವೈಜ್ಞಾನಿಕ ಪಾಠ ತೆಗೆಯಬೇಕು.
  • ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ, ಉಪನ್ಯಾಸಕ, ಪ್ರಾಧ್ಯಾಪಕರ ಹುದ್ದೆಗಳ ಭರ್ತಿ ಮಾಡಿ ಗುಣಮಟ್ಟದ ಬೋಧನೆ ನೀಡಬೇಕು.

ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಎಸ್ಎಫ್ಐ ರಾಜ್ಯ ಸಮಿತಿ ಸೆ. 7 ರಂದು ರಾಜ್ಯಾದ್ಯಂತ ತಾಲ್ಲೂಕು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆಸಿ ರಾಜ್ಯ ಸರ್ಕಾರಕ್ಕೆ ಈ ಮನವಿ ಸಲ್ಲಿಸಿದೆ. ಈ ಎಲ್ಲ ಬೇಡಿಕೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಸಮಿತಿಯು ಸರ್ಕಾರವನ್ನು ಒತ್ತಾಯಿಸಿದೆ. ಸರ್ಕಾರ ಸ್ಪಂದಿಸದಿದ್ದರೆ ವಿದ್ಯಾರ್ಥಿಗಳ ಹೋರಾಟ ತೀವ್ರಗೊಳಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಮನವಿ ಮೂಲಕ ಮಾಡಿದೆ. ಮನವಿ ಸ್ವೀಕರಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಉತ್ತರ ಕನ್ನಡ, ಕಾರವಾರ ಮತ್ತು ಮಾನ್ಯ ಸಹಾಯಕ ಆಯುಕ್ತರು ಮನವಿಯನ್ನು ಸರ್ಕಾರಕ್ಕೆ ತಲುಪಿಸುವುದಾಗ ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ಐ ನ ಜಿಲ್ಲಾ ಸಂಚಾಲಕರಾದ ಗಣೇಶ ರಾಠೋಡ, ಮುಖಂಡರಾದ ಸುನಿಲ ಪಾಟೀಲ್, ಅಬ್ದುಲ್ ಶೇಖ್, ವಿರೇಶ್ ರಾಠೋಡ, ಶೇಖಪ್ಪ ಬಳ್ಳಾರಿ , ಮಲ್ಲಿಕಾರ್ಜುನ, ಯಲ್ಲಪ್ಪ, ವಸಂತ ಹಾಗೂ ಮುಂತಾದವರು ಹಾಜರಿದ್ದರು.