ಸಿದ್ದಾಪುರ: ವಿದ್ಯಾರ್ಥಿಗಳ ದೂರಿನ ಹಿನ್ನೆಲೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮತ್ತವರ ತಂಡ ಗುರುವಾರ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಪಕ್ಕದ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಬಾಲಿಕೊಪ್ಪ ಬಾಲವಿಹಾರಕ್ಕೆ ಭೇಟಿ ನೀಡಿ ಊಟದ ವ್ಯವಸ್ಥೆ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ ವಸತಿ ನಿಲಯಗಳಲ್ಲಿರುವ ಲೋಪದೋಷ ಸರಿಪಡಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಡಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಆರ್.ನಾಯ್ಕ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಾರುತಿ ಕಿಂದ್ರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ನಾಯ್ಕ, ಶಿರಳಗಿ ಘಟಕಾಧ್ಯಕ್ಷ ಅಣ್ಣಪ್ಪ ನಾಯ್ಕ ಉಪಸ್ಥಿತರಿದ್ದರು.