ಭಟ್ಕಳ: ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಗುದ್ದಲಿ ಪೂಜೆ ನೆರವೇರಿಸಿದರು. ಪೌರ ಕಾರ್ಮಿಕರಿಗಾಗಿ 50 ಲಕ್ಷ ರೂಪಾಯಿ ಅನುದಾನವದಲ್ಲಿ ಜಾಲಿಯಲ್ಲಿ ಈ ಕಟ್ಟಡ ನಿರ್ಮಾಣವಾಗುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸುಬ್ರಾಯ್ ದೇವಾಡಿಗ, ರವಿ ನಾಯ್ಕ ಜಾಲಿ ಮುಂತಾದವರು ಉಪಸ್ಥಿತರಿದ್ದರು.