ಹಾವೇರಿ: ಹದಿನಾರು ವರ್ಷದ ಬಾಲಕಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿರೋ ಆನಿಕೇರಿಯಲ್ಲಿ ನಡೆದಿದೆ. ಸಾವಿತ್ರಿ ದೊಡ್ಡಮನಿ (16) ವರ್ಷ ಮೃತ ಬಾಲಕಿ.
ಈಕೆ ಪಟ್ಟಣದ ಜನತಾ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದಳು. ಕೆರೆಯಿಂದ ಬಾಲಕಿಯ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ದಾಖಲು ಮಾಡಲಾಗಿದೆ. ಬೆಳಿಗ್ಗೆ ಶಾಲೆಗೆ ಹೋಗೋದಾಗಿ ಹೇಳಿ ಹೋಗಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಹಾನಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.