ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ

ಭಟ್ಕಳ: ಶಿರಾಲಿಯ ಸಾರದೊಳೆ ಹಳೇಕೋಟೆ ಹನುಮಂತ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಬೆಳಿಗ್ಗೆ 10.30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ 168 ಜಯಂತ್ಯುತ್ಸವವನ್ನು ಅದ್ದೂರಿಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಮಾವಳ್ಳಿ ಹೋಬಳಿ ನಾಮಧಾರಿ ಸಮಾಜದ ಅಧ್ಯಕ್ಷ ಸುಬ್ರಾಯ ನಾಯ್ಕ ಹೇಳಿದ್ದಾರೆ.

ಶನಿವಾರ ಬೆಳಿಗ್ಗೆ ಶಿರಾಲಿ ಪೇಟೆಯಿಂದ ಸಾರದೊಳೆ ಹನುಮಂತ ದೇವಸ್ಥಾನದ ವರೆಗೆ ನಾರಾಯಣ ಗುರುಗಳ ಭಾವಚಿತ್ರದೊಂದಿಗೆ ಬೃಹತ್ ಮೆರವಣಿಗೆ ನಡೆಸಿ ಕಾರ್ಯಕ್ರಮ ಆರಂಭಿಸಲಾಗುವುದು ಎಂದರು.

ಭಟ್ಕಳ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಒಬ್ಬ ಮಾನವತಾವಾದಿಯಾಗಿದ್ದು, ಅಸ್ಪೃಶ್ಯತೆ ಹೋಗಲಾಡಿಸಲು ಮತ್ತು ಹಿಂದೂ ಸಮಾಜವನ್ನು ಒಗ್ಗೂಡಿಸಲು ಸಾಕಷ್ಟು ಶ್ರಮವಹಿಸಿದ್ದರು. ಇಂತವರ ಜೀವನ ಚರಿತ್ರೆ ನಾವೆಲ್ಲರೂ ತಿಳಿದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಅವರ ಜಯಂತ್ಯುತ್ಸವ ಸರ್ಕಾರದ ಸಹಕಾರದೊಂದಿಗೆ ಆಚರಿಸಲು ನಿರ್ಧರಿಸಿದ್ದೇವೆ. ಈ ಕಾರ್ಯಕ್ರಮದಲ್ಲಿ ಎಲ್ಲ ಹಿಂದುಳಿದ ಸಮಾಜ ಬಾಂಧವರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.