ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀ. ಗೆ 3 ರೂ. ಹೆಚ್ಚಿಸಲು ಕೆಎಂಎಫ್ ತೀರ್ಮಾನಿಸಿದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿದೆ.
ಕೆಎಂಎಫ್ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಹಾಲಿನ ದರ ಹೆಚ್ಚಿಸಲು ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ಹಾಲಿನ ದರ ಹೆಚ್ಚಿಸಲು 14 ಜಿಲ್ಲಾ ಹಾಲು ಒಕ್ಕೂಟಗಳು ಒಲವು ತೋರಿದ್ದಾರೆ. ಆದರೆ, ಸರ್ಕಾರ ಅನುಮತಿ ನೀಡಿದ ನಂತರವೇ ಈ ನಿರ್ಧಾರ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈತರ ಅನುಕೂಲಕ್ಕೋಸ್ಕರ ಈಗ ದರ ಹೆಚ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೇ ಖಾಸಗಿ ಬ್ರಾಂಡ್‍ಗಳ ಹಾಲಿನ ದರದಲ್ಲಿ ಭಾರಿ ಬದಲಾವಣೆಯಾಗಿದೆ. ಕೆಎಂಎಫ್ ಮಾತ್ರ ಪ್ರತಿ ಲೀಟರ್ ಹಾಲನ್ನು 37 ರೂ. ಗೆ ನೀಡುತ್ತಿದೆ. 8-10 ರೂ. ವ್ಯತ್ಯಾಸ ಕಂಡುಬರುತ್ತಿದೆ. ಹೆಚ್ಚಿಸುವ ದರವನ್ನು ರೈತರಿಗೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಆಡಳಿತ ಮಂಡಳಿ ಮೂಲಗಳು ಹೇಳಿವೆ.