ಸತತವಾಗಿ ಸುರಿಯುತ್ತಿರುವ ಮಳೆಗೆ ಕುಸಿದ ಮನೆಯ ಗೋಡೆ

ಮುಂಡಗೋಡ: ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನ ಹಲವೆಡೆ ಅನೇಕ ಅನಾಹುತಗಳಾಗಿದ್ದು, ಜನರಿಗೆ ಸಂಕಷ್ಟವನ್ನುಂಟು ಮಾಡಿದೆ.

ನ್ಯಾಸರ್ಗಿ ಪ್ಲಾಟ್ ನಲ್ಲಿ ನಾಗವ್ವ ನಾಗರಾಜ ಭೋವಿ ಎಂಬುವರ ಮನೆಯ ಗೋಡೆ ಕುಸಿದು ಬಿದ್ದು ಹಾನಿಯಾಗಿದೆ. ಅಲ್ಲದೇ ರವಿವಾರ ರಾತ್ರಿ ನಿರಂತರವಾಗಿ ಸುರಿದ ಮಳೆಗೆ ಪಟ್ಟಣದ ನೆಹರುನಗರದ ಅಶೋಕ ಹನುಮಂತ ರಾಮಗೇರಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಸುಧಾ ಭೋವಿ, ಉಪಾಧ್ಯಕ್ಷ ಶ್ರೀಕಾಂತ್ ಸಾನು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.