ಗೋಕರ್ಣ: ವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಭಾವಿ ಕೊಡ್ಲದಲ್ಲಿ ನಡೆದಿದೆ. ಸುರೇಶ ಮುರ್ಕುಂಡಿ ಆಗೇರ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೃತ ದೇಹವನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಚುರುಕು ಗೊಂಡಿದೆ.