ಕಾರು ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ

ಮುಂಡಗೋಡ: ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಜ್ಜಿಗೇರಿ ಕ್ರಾಸ್ ಬಳಿ ಸಂಭವಿಸಿದೆ. ಜೇನಮುರಿ ಗ್ರಾಮದ ಬಸವರಾಜ್ ಶ್ಯಾಡಂಬಿ ಎಂಬುವನು ಗಾಯಗೊಂಡ ವ್ಯಕ್ತಿಯಾಗಿದ್ದಾನೆ.

ಈತ ತನ್ನ ಬೈಕ್ ಸವಾರಿ ಮಾಡಿಕೊಂಡು ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡವನಿಗೆ ಎರಡು ಕಾಲು ಸೇರಿದಂತೆ ಕೆಲವೆಡೆ ಪೆಟ್ಟಾಗಿದೆ. ಈತನಿಗೆ ಮುಂಡಗೋಡ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸಗೆ ಕಳುಹಿಸಲಾಗಿದೆ.
108 ಅಂಬ್ಯಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಹಾಗೂ ಚಾಲಕ ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.