ಯಲ್ಲಾಪುರ: ತಾಲೂಕಿನ ಬಾಸಲದ ಸಮುದಾಯ ಭವನದಲ್ಲಿ ಸಿಡಿಪಿಒ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೋಷಣಾ ಮಾಸಾಚರಣೆ ನಡೆಯಿತು.
ಗ್ರಾ.ಪಂ ಉಪಾಧ್ಯಕ್ಷ ಸುಬ್ಬಣ್ಣ ಕುಂಟೆಕಳಿ, ಸದಸ್ಯೆ ಪಾರ್ವತಿ ಭಟ್ಟ ಹಾಗೂ ಆರೋಗ್ಯ ಇಲಾಖೆ, ಸಿಡಿಪಿಒ ಇಲಾಖೆ ಅಧಿಕಾರಿಗಳು ಭಾಗವಹಿಸಿ, ಮಕ್ಕಳ ಬೌದ್ಧಿಕ ಹಾಗೂ ದೈಹಿಕ ಬೆಳವಣಿಗೆಗೆ ಪೌಷ್ಠಿಕ ಆಹಾರದ ಅಗತ್ಯತೆಯ ಬಗ್ಗೆ ತಿಳಿಸಿದರು. ಗ್ರಾ.ಪಂ ವ್ಯಾಪ್ತಿಯ 8 ಅಂಗನವಾಡಿ ಕೇಂದ್ರಗಳ ಮಕ್ಕಳು, ಕಾರ್ಯಕರ್ತೆಯರು, ಪಾಲಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೌಷ್ಠಿಕ ಆಹಾರಗಳ ಪ್ರದರ್ಶನ ನಡೆಯಿತು.