ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಮಂಗಳವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಪೂಜಾ ಕೈಂಕರ್ಯವನ್ನು ವೆ. ಪರಮೇಶ್ವರ ಮಾರ್ಕಾಂಡೆ ಮತ್ತು ವೆ. ಮಹಾಬಲ ಉಪಾಧ್ಯ ನೆರವೇರಿಸಿದರು.
ಇದಕ್ಕೂ ಮೊದಲು ಮಹಾಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಳಿಕ ತಾಮ್ರ ಗೌರಿ ದೇವಾಲಯಕ್ಕೆ ತೆರಳಿ ದೇವಿ ದರ್ಶನ ಪಡೆದರು. ಈ ವೇಳೆ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಶರಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಜನ್ನು ಹಾಗೂ ಮತ್ತಿತರು ಉಪಸ್ಥಿತರಿದ್ದರು.



