ಗುಜರಾತ್ ಕರಾವಳಿಯಲ್ಲಿ 200 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ: 6 ಮಂದಿ ಅರೆಸ್ಟ್.!

ಗುಜರಾತ್: ರಾಜ್ಯ ಭಯೋತ್ಪಾದನಾ ನಿಗ್ರಹ ದಳ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯನ್ನು ವಶಕ್ಕೆ ಪಡೆದಿದ್ದಾರೆ.

ದೋಣಿಯಲ್ಲಿ 200 ಕೋಟಿ ರೂ. ಗೂ ಅಧಿಕ ಮೌಲ್ಯದ 40 ಕೆಜಿ ಹೆರಾಯಿನ್ ಪತ್ತೆಯಾಗಿದ್ದು, ಆರು ಪಾಕಿಸ್ತಾನಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಎಟಿಎಸ್ ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್ ಎಟಿಎಸ್ ಮತ್ತು ಕೋಸ್ಟ್ ಗಾರ್ಡ್ ಈ ಹಿಂದೆಯೂ ಮಾದಕವಸ್ತು ಕಳ್ಳಸಾಗಣೆಯಂತಹ ಪ್ರಯತ್ನಗಳನ್ನು ವಿಫಲಗೊಳಿಸಿದ್ದರು. ಗುಜರಾತ್ ಕರಾವಳಿಯ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲು ಯೋಜಿಸಿದ್ದ ಭಾರೀ ಪ್ರಮಾಣದ ಮಾದಕವಸ್ತುಗಳೊಂದಿಗೆ ವಿದೇಶಿ ಪ್ರಜೆಗಳನ್ನು ಹಿಡಿದು ಬಂಧಿಸಿದ್ದರು.