ಮನೆಯ ಗೋಡೆ ಕುಸಿದು ಹಾನಿ

ಮುಂಡಗೋಡ: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮನೆಯೊಂದು ಬುಧವಾರ ಬಿದ್ದಿದೆ. ರಮೇಶ ಶಾಂತಪ್ಪ ಶೇಖಾಯಿ ಎಂಬುವರ ಮನೆ ಗೋಡೆ ಕುಸಿದು ಹಾನಿಯಾಗಿದೆ. ತಾಲೂಕಿನಲ್ಲಿ ನಿರಂತರವಾಗಿ ಹದಿನೈದು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಕೊಪ್ಪ ಗ್ರಾಮದ ಮನೆಯ ಗೋಡೆ, ಮೇಲ್ಛಾವಣಿ ಕುಸಿದು ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಹಾರ ಒದಗಿಸಬೇಕಾಗಿದೆ.