ದೇವಬಾಗ್ ಬೀಚ್‌ನಲ್ಲಿ ಅಪರಿಚಿತ ಶವ ಪತ್ತೆ.!

ಕಾರವಾರ: ತಾಲ್ಲೂಕಿನ ಸದಾಶಿವಗಡದ ದೇವಬಾಗ ಕಡಲತೀರದಲ್ಲಿ ಬುಧವಾರ ಅಪರಿಚಿತ ಶವ ಪತ್ತೆಯಾಗಿದೆ.
ಮೀನುಗಾರಿಕೆಗೆ ತೆರಳಿದವರಿಗೆ ದೇವಬಾಗ ಕಡಲತೀರದಲ್ಲಿ ಸುಮಾರು 45-50 ವರ್ಷ ಪ್ರಾಯದ ಪುರುಷನ ಮೃತದೇಹ ಕಂಡು ಬಂದಿದೆ.

ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚಿತ್ತಾಕುಲ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪಂಚನಾಮೆ ನಡೆಸಿ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿದ್ದಾರೆ.

ಕಾಳಿ ಸೇತುವೆಯ ಮೇಲಿಂದ ಜಿಗಿದು ಅಥವಾ ಇನ್ಯಾವುದೋ ರೀತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ, ಇಲ್ಲವೇ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದ್ದು ಶವದ ಗುರುತು ಇನ್ನೂ ಪತ್ತೆಯಾಗಿಲ್ಲ. ಆದ್ದರಿಂದ ಮೃತನ ಪರಿಚಯ ಅಥವಾ ವಿಳಾಸದ ಮಾಹಿತಿ ಇದ್ದವರು ಚಿತ್ತಾಕುಲ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಲಾಗಿದೆ. ಅಥವಾ ದೂರವಾಣಿ ಸಂಖ್ಯೆ 08382-265733, 9480805248 ಕೂಡಾ ಮಾಹಿತಿ ನೀಡಬಹುದಾಗಿದೆ.