ಬೆಂಗಳೂರು: ಮೆಟ್ರೋದಲ್ಲಿ ತಾಂತ್ರಿಕ ದೋಷ ಉಂಟಾಗಿ ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ ವ್ಯತ್ಯಯ ಉಂಟಾಗಿದೆ. ನಿರ್ವಹಣಾ ತಂಡ ಈಗಾಗಲೇ ತಾಂತ್ರಿಕ ದೋಷ ಸರಿಪಡಿಸಲು ಪರಿಶೀಲನೆ ನಡೆಸುತ್ತಿದೆ. ಶೀಘ್ರದಲ್ಲೇ ಸಮಸ್ಯೆ ಸರಿಯಾಗಲಿದ್ದು, ರೈಲುಗಳ ಸಂಚಾರ ಸಹಜವಾಗಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಒಂದೇ ಟ್ರ್ಯಾಕ್ ನಲ್ಲಿ 25 ರಿಂದ 30 ನಿಮಿಷಕ್ಕೆ ರೈಲು ಸಂಚರಿಸುತ್ತಿವೆ. ಇದರಿಂದ ಮೈಸೂರು ರಸ್ತೆಯಿಂದ ಕೆಂಗೇರಿ ತನಕದ ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲಿಗಾಗಿ ಕಾಯುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.