ಕೀವ್: ಉಕ್ರೇನ್ ರಾಜಧಾನಿ ಕೀವ್‍ನಲ್ಲಿ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಝೆಲೆನ್ಸ್ಕಿ ವಕ್ತಾರ ಸೆರ್ಹಿ ನೈಕಿಫೊರೊವ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಝೆಲೆನ್ಸ್ಕಿ ಅವರು ಯುದ್ಧಪೀಡಿತ ಇಜಿಯಮ್ ನಗರಕ್ಕೆ ಭೇಟಿ ನೀಡಿದ್ದರು. ನಂತರ ಅಲ್ಲಿಂದ ತೆರಳುತ್ತಿದ್ದ ವೇಳೆ ಕೀವ್‌ನ ಖಾರ್ಕಿವ್ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಕಾರಿಗೆ ಮತ್ತೊಂದು ಪ್ರಯಾಣಿಕ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಇನ್ನು ಝೆಲೆನ್‌ಸ್ಕಿ ಅವರಿಗೆ ವೈದ್ಯಕೀಯ ತಂಡ ಪ್ರಥಮ ಚಿಕಿತ್ಸೆ ಒದಗಿಸಿ ಬಳಿಕ ಅವರನ್ನು ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಯಿತು. ಆದರೆ ಗಂಭೀರ ಗಾಯವಾಗಿಲ್ಲ ಎಂದು ವಕ್ತಾರ ಸೆರ್ಹಿ ಹೇಳಿದ್ದಾರೆ.