ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು: ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಧಾನಸಭೆಯ ಉಪ ಸಭಾಪತಿ ಸವದತ್ತಿ ಶಾಸಕ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದ ಮಾಮನಿ ಕಳೆದ ಕೆಲ ದಿನಗಳಿಂದ ಕುತ್ತಿಗೆ ನೋವಿನಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚೆನ್ನೈಗೆ ಶಿಪ್ಟ್ ಮಾಡಲಾಗಿದೆ. ಸದ್ಯ ಮಾಮನಿ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು ಅಗತ್ಯವಿದ್ದರೆ ಬೆಂಗಳೂರಿನಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.