ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಇಂಜಿನಿಯರ್ಸ್ ಡೇ ಶುಭಾಷಯ ಕೋರಿದ್ದಾರೆ. ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿರುವ ನುರಿತ ಮತ್ತು ಪ್ರತಿಭಾವಂತ ಎಂಜಿನಿಯರ್‌ಗಳ ಬಗ್ಗೆ ದೇಶಕ್ಕೆ ಹೆಮ್ಮೆಯಿದೆ ಎಂದು ಅವರು ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಎಲ್ಲ ಎಂಜಿನಿಯರ್‌ಗಳಿಗೆ ಎಂಜಿನಿಯರ್‌ಗಳ ದಿನದ ಶುಭಾಶಯಗಳು. ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿರುವ ನುರಿತ ಮತ್ತು ಪ್ರತಿಭಾನ್ವಿತ ಎಂಜಿನಿಯರ್‌ಗಳ ಸಮೂಹವನ್ನು ಹೊಂದಿರುವುದಕ್ಕಾಗಿ ರಾಷ್ಟ್ರವು ಹೆಮ್ಮೆಪಡುತ್ತದೆ. ಹೆಚ್ಚಿನ ಎಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸುವುದು ಸೇರಿದಂತೆ ಎಂಜಿನಿಯರಿಂಗ್ ಅಧ್ಯಯನಕ್ಕಾಗಿ ಮೂಲಸೌಕರ್ಯಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.