ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ಯುವಮೋರ್ಚಾದಿಂದ ಬೃಹತ್ ರಕ್ತದಾನ ಶಿಬಿರ

ಕಾರವಾರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಕಾರವಾರದಲ್ಲಿ ಈ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಬಿಜೆಪಿ ಪಕ್ಷದ ಕಾರ್ಯಕರ್ತರು, ಮೋದಿಯವರ ಅಭಿಮಾನಿಗಳು ಹಾಗೂ ರಕ್ತದಾನ ಮಾಡಲು ಇಚ್ಚಿಸುವವರು ಈ ಕೂಡಲೇ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಬಿಜೆಪಿ ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.